
ಮಂಗಳೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ತುಮಕೂರು ಅಪರ ಜಿಲ್ಲಾಧಿಕಾರಿಯಾಗಿದ್ದ ಚನ್ನಬಸಪ್ಪ ಕೆ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಈ ಮೊದಲು ಅಕ್ಷಯ್ ಶ್ರೀಧರ್ ಅವರು ಕಳೆದ ಎರಡು ವರ್ಷಗಳಿಂದ ಮಹಾನಗರ ಪಾಲಿಕೆಯ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಇವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದ್ದು, ಮನಪಾ ನೂತನ ಆಯುಕ್ತರಾಗಿ ಚನ್ನಬಸಪ್ಪ ಕೆ ಅವರನ್ನು ನೇಮಕ ಮಾಡಲಾಗಿದೆ.















