
ಗಾಂಜಾ ಪ್ರಕರಣಕ್ಕೆ ಸಂಬAಧಿಸಿದAತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ತಪ್ಪಿಸಿಕೊಂಡಿದ್ದ, ನರಿಂಗಾನ ನಿವಾಸಿ ಮೊಹಮ್ಮದ್ ಬಶೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಗಾಂಜಾ ಪ್ರಕರಣದಲ್ಲಿ ಬಶೀರ್ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಗಿದ್ದು, ಕಳೆದ ಐದು ವರ್ಷಗಳಿಂದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.
ಈ ಹಿನ್ನಲೆಯಲ್ಲಿ ಆರೋಪಿಯ ವಿರುದ್ಧ ವಾರೆಂಟ್ ಜಾರಿ ಮಾಡಲಾಗಿದ್ದು, ಇದೀಗ ಪುತ್ತೂರು ನಗರ ಪೊಲೀಸ್ ನಿರೀಕ್ಷಕರ ಮಾರ್ಗದರ್ಶನದಲ್ಲಿ ಮೊಹಮ್ಮದ್ ಬಶೀರ್‌ನನ್ನು ಬಂಧಿಸಲಾಗಿದೆ.










