Wednesday, March 18, 2026
ಸುದ್ದಿ

ಪುತ್ತೂರಿನ ಶಾಂತಿನಗರ ಸರಕಾರಿ ಶಾಲೆಯ ಬೀಗ ಮುರಿದು 16 ಬ್ಯಾಟರಿ ಕಳವು..! ಕಹಳೆ ನ್ಯೂಸ್

ಪುತ್ತೂರು : ಸರಕಾರಿ ಶಾಲೆಯಲ್ಲಿರುವ ಕಂಪ್ಯೂಟರ್ ಕೊಠಡಿಯ ಯುಪಿಯಸ್ ಹಳೆಯ ಬ್ಯಾಟರಿಗಳನ್ನು ಕಳವು ಮಾಡಿರುವ ಘಟನೆ ಪುತ್ತೂರಿನ ಕೋಡಿಂಬಾಡಿಯ ಶಾಂತಿನಗರದಲ್ಲಿ ನಡೆದಿದೆ.

ಶಾಂತಿನಗರ ಪ್ರೌಢಶಾಲೆಯ ಒಂದನೇ ಮಹಡಿಯಲ್ಲಿರುವ ಕಂಪ್ಯೂಟರ್ ಕೊಠಡಿಯಲ್ಲಿ ಇರಿಸಿದ್ದ ಕಂಪ್ಯೂಟರಿನ ಹಳೆಯ ಬ್ಯಾಟರಿಗಳನ್ನು ಕಳವು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮಾಡಲಾಗಿದೆ ಎಂದು ಮುಖ್ಯೋಪಾಧ್ಯಾಯ ವಿಷ್ಣುಪ್ರಸಾದ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಾ.9ರಂದು ಶಾಲಾ ಅವಧಿ ಮುಗಿದ ಬಳಿಕ, ಶಾಲೆಗೆ ಎಂಟ್ರಿ ಕೊಟ್ಟಿರುವ ಖದೀಮರು ಕೊಠಡಿಯ ಬೀಗ ಮುರಿದು ಕಳವು ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯೋಪಾಧ್ಯಾಯರು ದೂರಿನಲ್ಲಿ ತಿಳಿಸಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು ಶಾಲೆಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು