
ಖಾಸಗಿ ಎಕ್ಸ್ಪ್ರೆಸ್ ಬಸ್ ಢಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕಿ ಗಂಭೀರ ಗಾಯಗೊಂಡ ಘಟನೆ ಕಾಪುವಿನಲ್ಲಿ ನಡೆದಿದೆ. ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ ಗಾಯಾಳು ವಿದ್ಯಾರ್ಥಿನಿ ಎಂದು ಗುರುತಿಸಲಾಗಿದ್ದು, ಇಂದು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ವರ್ಷಿತಾ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ದಾಟಲು ನಿಂತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎಕ್ಸ್ಪ್ರೆಸ್ ಬಸ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಇನ್ನೂ ಬಾಲಕಿಯ ತಲೆಗೆ ಗಂಭೀರ ಏಟಾಗಿದ್ದು, ಆಕೆಯನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಖಾಸಗಿ ಬಸ್‌ನ್ನು ವಶಕ್ಕೆ ಪಡೆದಿದ್ದಾರೆ.
















