Wednesday, March 18, 2026
ಸುದ್ದಿ

ಗೆಳೆಯನನ್ನ ಭೇಟಿಯಾಗಲು ದುಬೈನಿಂದ ಬಂದಿದ್ದ ಗಗನ ಸಖಿ ಬೆಂಗಳೂರಿನಲ್ಲಿ ಆತ್ಮಹತ್ಯೆ –ಕಹಳೆ ನ್ಯೂಸ್

ಬೆಂಗಳೂರು: ಅಪಾರ್ಟ್ಮೆಂಟ್ ಮೇಲಿಂದ ಹಾರಿ ಗಗನಸಖಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋರಮಂಗಲದ ೮ನೇ ಬ್ಲಾಕ್‌ನಲ್ಲಿ ನಡೆದಿದೆ. ಅರ್ಚನಾ ಅಪಾರ್ಟ್ಮೆಂಟ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿ. ರೇಣುಕಾ ರೆಸಿಡೆನ್ಸಿಯ ನಾಲ್ಕನೇ ಮಹಡಿಯಿಂದ ಅರ್ಚನಾ ಹಾರಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಅರ್ಚನಾ, ಹಿಮಾಚಲ ಪ್ರದೇಶ ಮೂಲದವರಾಗಿದ್ದು, ಪ್ರತಿಷ್ಠಿತ ಏರ್‌ಲೈನ್ಸ್ನಲ್ಲಿ ಗಗನಸಕಿ ಆಗಿ ಕೆಲಸ ಮಾಡುತ್ತಿದ್ದರು. ಕೇರಳ ಮೂಲದ ಐಟಿ ಉದ್ಯೋಗಿಯಾಗಿದ್ದ ಗೆಳೆಯ ಆದೇಶ್ ಎಂಬಾತನ ಭೇಟಿಯಾಗೋದಿಕ್ಕಾಗಿ ಅರ್ಚನ ಬೆಂಗಳೂರಿಗೆ ಬಂದಿದ್ದರು. ಕೆಲವು ವರ್ಷಗಳಿಂದ ಇಬ್ಬರು ಪ್ರೀತಿಸ್ತಿದ್ದರು ಎಂದು ತಿಳಿದುಬಂದಿದೆ. ಇದೀಗ ಅರ್ಚನ ಸಾವನ್ನಪ್ಪಿದ್ದು, ಸದ್ಯ ಮೃತದೇಹವನ್ನ ಸೆಂಟ್ ಜಾನ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು