ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೋದಿ ಹವಾ : ಕೊಲ್ನಾಡಿನಲ್ಲಿ ಬಿಜೆಪಿಯ ಬೃಹತ್ ಸಮಾವೇಶ..! – ಕಹಳೆ ನ್ಯೂಸ್


ಸಾವಿರಾರು ಸಂಖ್ಯೆಯ ಕಾರ್ಯಕರ್ತನ್ನು ಉದ್ದೇಶಿಸಿ ಮಾತನಾಡಿದ ಅವರು ಈ ರಾಜ್ಯದ ಮತ್ತು ದೇಶದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ 13 ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಅವರು 13 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು.


ಮತದಾನ ಮಾಡುವ ದಿನ ದೂರವಿಲ್ಲ. ಪ್ರತಿಯೊಬ್ಬ ಮತದಾರ ತನ್ನ ಜವಾಬ್ದಾರಿ ಅರಿತು ಈ ರಾಜ್ಯದ ಪ್ರಗತಿಗಾಗಿ ತಪ್ಪದೆ ಮತ ಚಲಾಯಿಸಬೇಕು. ಕರ್ನಾಟಕವನ್ನು ನಂಬರ್ ಒನ್ ಮತ್ತು ಸೂಪರ್ ಪವರ್ ರಾಜ್ಯವನ್ನಾಗಿಸುವ ಸಂಕಲ್ಪದೊಂದಿಗೆ ಭಾರತೀಯ ಜನತಾ ಪಾರ್ಟಿಯನ್ನು ಬೆಂಬಲಿಸಬೇಕು ಎಂದು ಅವರು ಮನವಿ ಮಾಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ಮುಖಂಡರಾದ ಶೋಭಾ ಕರಂದ್ಲಾಜೆ, ಪ್ರತಾಪಸಿಂಹ ನಾಯಕ್, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 13 ವಿಧಾನಸಭಾ ಕ್ಷೇತ್ರಗಳ ಬಜೆಪಿ ಅಭ್ಯರ್ಥಿಗಳು ಉಪಸ್ಥಿತರಿದ್ದರು.











