ಆರ್ಭಟಿಸಲಿದೆ ಬಿಪರ್‌ಜಾಯ್ ಚಂಡಮಾರುತ : ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಮಳೆ ಸಾಧ್ಯತೆ –ಕಹಳೆ ನ್ಯೂಸ್

ಬಿಪರ್‌ಜಾಯ್ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದಿದೆ, ಇದರ ಪರಿಣಾಮ ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಿಗೆ ತಟ್ಟಾಲಿದೆ.

ಮುಂದಿನ 3-4 ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಕರಾವಳಿ, ಗೋವಾ, ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಅಸ್ಸಾಂ, ಮಿಜೋರಾಂ, ಮಣಿಪುರ, ಅರಿಣಾಚಲಪ್ರದೇಶ, ಮೇಘಾಲಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಭಾರೀ ಮಳೆಯಾಗಲಿದೆ, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.











