Thursday, March 19, 2026
ಸುದ್ದಿ

ಪುತ್ತೂರು ಕ್ಷೇತ್ರದ ಅಭಿವೃದ್ದಿ ವಿಚಾರ ಮುಖ್ಯಮಂತ್ರಿಗಳ ಜೊತೆ ಶಾಸಕ ರೈ ಮಾತುಕತೆ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ವಿಧಾನಸಬಾ ಕ್ಷೇತ್ರದಲ್ಲಿ ಕೈಗೊಳ್ಳಬೇಕಾದ ಅಭಿವೃದ್ದಿ ಕಾರ್ಯಗಳು ಮತ್ತು ಶಾಸಕರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ದಿ ಯೋಜನೆಯ ಕುರಿತು ಶಾಸಕರಾದ ಅಶೋಕ್ ರೈಯವರು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಜೊತೆ ಮಾತುಕತೆ ನಡೆಸಿದರು.

ಸೀಎಂ ನಿವಾಸ ಕೃಷ್ಣಾದಲ್ಲಿ ಸಿದ್ದರಾಮಯ್ಯ ರವರನ್ನು ಭೇಟಿಯಾದ ಶಾಸಕ ಅಶೋಕ್ ರೈಯವರು ಪುತ್ತೂರು ಕ್ಷೇತ್ರದ ಅಭಿವೃದ್ದಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು. ಕ್ಷೇತ್ರದಲ್ಲಿ ಮಾಡಬೇಕಾದ ಮತ್ತು ಅಗತ್ಯವಾಗಿ ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರು ವಿಧಾನ ಸಬಾ ಕ್ಷೇತ್ರ ವ್ಯಾಪ್ತಿಯ ಮೂಲಭೂತ ಸಮಸ್ಯೆಗಳು ಮತ್ತು ಬಹುಕಾಲದ ಬೇಡಿಕೆಗಳ ಬಗ್ಗೆಯೂ ಚರ್ಚೆ ನಡೆಸಿದರು. ತಮ್ಮ ಎಲ್ಲಾ ಬೇಡಿಕೆಗಳ ಬಗ್ಗೆ ಪರಿಶೀಲಿಸಿ ಬೇಡಿಕೆಗಳನ್ನು ಈಡೇರಿಸುವಲ್ಲಿ ಪ್ರಯತ್ನಿಸುವುದಾಗ ಸಿದ್ದರಾಮಯ್ಯರವರು ಬರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು