Thursday, March 19, 2026
ಸುದ್ದಿ

ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಪ್ರಫುಲ್ಲ ಗಣೇಶ್ ರವರಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ಕಡಬದ ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಅಬಾಕಸ್ ಗಣಿತ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಪ್ರಾಂಶುಪಾಲರಾದ ವಂ| ಅಮಿತ್ ಪ್ರಕಾಶ್ ರೋಡ್ರಿಗಸ್ ರವರು ವಹಿಸಿ ಮಾತನಾಡಿ, ಅಬಾಕಸ್ ತರಗತಿಯನ್ನು ನಮ್ಮ ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿಗಳ ಬುದ್ದಿ ಶಕ್ತಿ ಉತ್ತಮಗೊಳ್ಳುತ್ತದೆ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಇನ್ನಿತರ ಚಟುವಟಿಕೆಗಳಲ್ಲಿಯೂ ಪ್ರಗತಿ ಸಾಧಿಸುತ್ತಾರೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು


ಅಬಾಕಸ್ ತರಗತಿಯ ಬಗ್ಗೆ ತರಬೇತಿ ನೀಡಲು ಮುಖ್ಯ ಅತಿಥಿಯಾಗಿ ಆಗಮಿಸಿದ ಐ.ಆರ್.ಸಿ.ಎಂ.ಡಿ ಎಜ್ಯುಕೇಶನ್ ಸೆಂಟರ್ ಪುತ್ತೂರು ಮತ್ತು ಸುಳ್ಯ ಇದರ ಸಿಇಒ ಆಗಿರುವ ಶ್ರೀಮತಿ ಪ್ರಫುಲ್ಲ ಗಣೇಶ್ ರವರು ಅಬಾಕಸ್ ತರಗತಿಯ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಾಹಿತಿಯನ್ನು ನೀಡಿದರು.

ಜಾಹೀರಾತು
ಜಾಹೀರಾತು