Thursday, March 19, 2026
ಸುದ್ದಿ

ಆಟೋದಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಇಬ್ಬರ ಸೆರೆ..! – ಕಹಳೆ ನ್ಯೂಸ್

ಬೆಳ್ತಂಗಡಿ : ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ರಿಕ್ಷಾದಲ್ಲಿ ಬಂದ ಪರಿಚಿತನಾದ ಕರೀಂ ಹತ್ತಿಸಿದ್ದಾನೆ.
ಬಳಿಕ ಮುಂದೆ ಹೋಗುತ್ತಿದ್ದ ಆಟೋದಲ್ಲೆ ಬಾಲಕಕಿಯ ಮೈ ಮೇಲೆ ಕೈ ಹಾಕಿ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ್ದಾನೆ.
ಈ ಸಂದರ್ಭ ಹೆದರಿದ ಬಾಲಕಿ ರಿಕ್ಷಾದಿಂದ ಹಾರಿದ್ದು ಗಾಯಗೊಂಡಿದ್ದಾಳೆ.

ಬಾಲಕಿ ರಸ್ತೆ ಬಿದ್ದು ನರಳಾಡುತ್ತಿರುವುದನ್ನು ಗಮನಿಸಿಯೂ ನಿಲ್ಲಿಸದೇ ಪರಾರಿಯಾಗಿದ್ದಾರೆ. ಈ ಸಂದರ್ಭ ಆ ರಸ್ತೆಯಲ್ಲಿ ಬರುತ್ತಿದ್ದ ವ್ಯಕ್ತಿಗಳು ಬಾಲಕಿಯನ್ನು ಉಪಚರಿಸಿ ಅವರ ಸಂಬAಧಿಕರ ಮನೆಗೆ ಕರೆದೊಯ್ದಿದ್ದಾರೆ.
ಬಳಿಕ ಮನೆಯವರು ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ಘಟನೆ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅರೋಪಿ ಕರೀಂ ಮತ್ತು ಆಟೋ ಚಾಲಕನನ್ನು ಬಂಧಿಸಿದ್ದಾರೆ.