ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಧಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆ – ಕಹಳೆ ನ್ಯೂಸ್

ನಳೀನ್ ಕುಮಾರ್ ಕಟೀಲ್ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಧಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಅನುಭವಿಸಿದ ಹಿನ್ನಲೆಯಲ್ಲಿ, ಈ ಸೋಲಿನ ಹೊಣೆಯನ್ನ ನಾನು ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದರು. ಇದೀಗ ರಾಜ್ಯಾಧ್ಯಕ್ಷ ಸ್ಧಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಳ್ಳಾರಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್ ಈಗಾಗಲೇ ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಎರಡು ವರ್ಷದ ಅವಧಿ ಮುಗಿದಿದೆ. ನಾನು ರಾಜೀನಾಮೆಯನ್ನೂ ನೀಡಿದ್ದೇನೆ. ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

ನಳೀನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲಿಯೇ, ಬಿಜೆಪಿಯಲ್ಲಿ ಈ ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ. ಹಿರಿಯ ನಾಯಕ ವಿ ಸೋಮಣ್ಣ ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ.














