ನಾನು ಇನ್ನೂ ರಾಜೀನಾಮೆ ಕೊಟ್ಟಿಲ್ಲ : ರಾಜೀನಾಮೆ ವಿಚಾರ ಸತ್ಯಕ್ಕೆ ದೂರವಾದದ್ದು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ –ಕಹಳೆ ನ್ಯೂಸ್

ರಾಜ್ಯಾಧ್ಯಕ್ಷ ಸ್ಧಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ ಈ ವಿಚಾರಕ್ಕೆ ‘ನಾನು ಇನ್ನೂ ರಾಜೀನಾಮೆ ಕೊಟ್ಟಿಲ್ಲ, ಕೊಡುತ್ತೇನೆ ಎಂದು ಹೇಳಿದ್ದು ಅಷ್ಟೆ’.. ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಕುರಿತು ಬಂದಿರುವ ಮಾಹಿತಿ ಸತ್ಯಕ್ಕೆ ದೂರವಾದುದು. ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಧಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತು ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಧಾನದಲ್ಲಿದ್ದೇನೆ ಎಂದು ತಿಳಿಸಿದ್ದಾಗಿ ಸ್ಪಷ್ಟೀಕರಣ ನೀಡಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಎಂದು ಅವರು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಧಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ.. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.














