ಬೆಂಗಳೂರಿನ ನೆಲಮಂಗಲದ ಧರ್ಮಸ್ಥಳ ಕ್ಷೇಮವನದಲ್ಲಿ ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ ಶಿಬಿರ – ಕಹಳೆ ನ್ಯೂಸ್

ಮಧ್ಯಾಹ್ನ 12 ಗಂಟೆಗೆ ಶಿಬಿರ ಆರಂಭವಾಗಲಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
70 ಶಾಸಕರಿಗೂ ತರಬೇತಿ ನಡೆಯಲಿದ್ದು, ನಿನ್ನೆ ಸಂಜೆಯೇ ಶಾಸಕರು ನೋಂದಣಿ ಮಾಡಿಸಿಕೊಂಡಿದ್ದಾರೆ. ಇಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ರವರೆಗೂ ಕಾರ್ಯಕ್ರಮಗಳು ನಡೆಯಲಿವೆ.
ಪ್ರತಿದಿನ ಸಂಜೆ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ನೂತನ ಶಾಸಕರ ಜೊತೆ ಸಂವಾದ ನಡೆಸಲಿದ್ದಾರೆ.











