Recent Posts

Saturday, April 25, 2026
ಸುದ್ದಿ

ರಾಜಕೀಯ ವೈಶಮ್ಯ: ಗುಂಡಿನ ಧಾಳಿ‌ಗೆ ಬಿಜೆಪಿ ಕಾರ್ಯಕರ್ತ ಬಲಿ – ಕಹಳೆ ನ್ಯೂಸ್

ಮಡಿಕೇರಿ: ಗುಂಡಿನ ದಾಳಿಗೆ ಬಿಜೆಪಿ ಕಾರ್ಯದರ್ಶಿ ವ್ಯಕ್ತಿಯೊಬ್ಬರು ಮೃತ ಪಟ್ಟಿರುವ ಘಟನೆ ಮಡಿಕೇರಿ ತಾಲ್ಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಮರಗೋಡು ಬಿಜೆಪಿ ಸ್ಥಾನೀಯ ಸಮಿತಿ ಕಾರ್ಯದರ್ಶಿ ಕಾನಡ್ಕ ತಿಲಕರಾಜ್ (40) ಮೃತ ದುರ್ದೈವಿ. ಆರೋಪಿ ಜೆಡಿಎಸ್ ಬೆಂಬಲಿತ ಗ್ರಾ.ಪಂ ಸದಸ್ಯ ಮುಂಡೋಡಿ ನಂದಾ ನಾಣಯ್ಯ ತಲೆ ಮರೆಸಿಕೊಂಡಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೃತರು ಪತ್ನಿ, ಒಬ್ಬ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಸೋಮವಾರ ಸಂಜೆ 6.30 ಗಂಟೆ ಸುಮಾರಿಗೆ ಮರಗೋಡು ಜಂಕ್ಷನ್ ಬಳಿ ತಿಲಕ್ ರಾಜ್ ಹಾಗೂ ನಂದ ನಾಣಯ್ಯ ನಡುವೆ ವಾಗ್ವಾದ ನಡೆದು ನಂದಾ ನಾಣಯ್ಯ ಹಾರಿಸಿದ ಗುಂಡಿಗೆ ತಿಲಕರಾಜ್ ಬಲಿಯಾಗಿರುವುದಾಗಿ ತಿಳಿದು ಬಂದಿದೆ.

ಗಾಯಾಳು ತಿಲಕರಾಜ್ ಅವರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಕರೆ ತರುವ ಸಂದರ್ಭ ಮಾರ್ಗ ಮಧ್ಯೆ ಮೃತ ಪಟ್ಟಿದ್ದಾರೆ.

ರಾಜಕೀಯ ವೈಷಮ್ಯವೇ ಕೃತ್ಯಕ್ಕೆ ಕಾರಣವೆಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಡಿವೈಎಸ್ ಪಿ ಸುಂದರ್ ರಾಜ್, ಗ್ರಾಮಾಂತರ ಠಾಣಾಧಿಕಾರಿ ಚೇತನ್ ಹಾಗೂ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ನಂದಾ ನಾಣಯ್ಯನ ಪತ್ತೆಗಾಗಿ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.