
ಕರಾವಳಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಮಂಗಳೂರಿನ ಕೊಟ್ಟಾರದಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿದೆ. ಮನೆ ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಸ್ಥಳೀಯ ಕಾರ್ಪೊರೇಟರ್‌ನ್ನು ಕುಟುಂಬ ತೀವ್ರ ತರಾಟಗೆ ತೆಗೆದುಕೊಂಡಿದೆ. ಈ ಸಮಸ್ಯೆಯನ್ನು ಮನೆಯವರು ಕಳೆದ ಹತ್ತು ವರ್ಷಗಳಿಂದ ಎದುರಿಸುತ್ತಿದ್ದು, ಚರಂಡಿಯಲ್ಲಿ ಹರಿಯುವ ನೀರು ಅವರ ಮನೆಗೆ ನುಗ್ಗುತ್ತದೆ. ಮನೆಯವರು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಮನೆಯಲ್ಲಿ ಉಳಿಯಬೇಕಾದ ಸ್ಥಿತಿ ನಿರ್ಮಾಣವಾಗಿದ್ದು, ಮನೆ ಮಂದಿ ಕಂಗಾಲಾಗಿದ್ದಾರೆ.















