Sunday, March 8, 2026
ಸುದ್ದಿ

ಕರಾವಳಿಯಾದ್ಯಂತ ಜು.10 ರವರೆಗೆ ಭಾರೀ ಮಳೆ ಸಾಧ್ಯತೆ : ರೇಡ್ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಕರ್ನಾಟಕದಲ್ಲಿ ಜು. 10 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

ಕರಾವಳಿ ಭಾಗದಲ್ಲಿ ತೀವ್ರತೆಯ ಮಳೆಯಾಗುವ ಸಾಧ್ಯತೆಯಿರುವುದರಿಂದ ಜು.6ರ ಇಂದು ಮಧ್ಯಾಹ್ನದಿಂದ ಜು.7 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕರಾವಳಿಯಲ್ಲಿಜಿಲ್ಲೆಯಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದ್ದುಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗಲಿದ್ದು, ಈ ಭಾಗದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ನೀಡಲಾಗಿದೆ.

ಜಾಹೀರಾತು
ಜಾಹೀರಾತು

ಈಗಾಗಲೇ ನಿರಂತರ ಮಳೆಯಿಂದ ಉಡುಪಿ ಹಾಗೂ ದಕ್ಷಿಣ ಕನ್ನಡದ ಹಲವು ಪ್ರದೇಶಗಳು ಜಲಾವೃತವಾಗಿದ್ದು ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು ತಗ್ಗು ಪ್ರದೇಶಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ಎರಡು ದಿನಗಳಿಂದ ಕ ಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.