
ಬಂಟ್ವಾಳ: ಚರ್ಚ್ ಗೆ ಪೂಜೆಗೆಂದು ಬರುವ ಓಮ್ನಿ ವಾಹನವೊಂದಕ್ಕೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರೊಂದು ಡಿಕ್ಕಿಯಾಗಿ ಓಮ್ನಿ ಕಾರು ಪಲ್ಟಿಯಾಗಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಜುಲೈ 9 ರಂದು ಬೆಳಿಗ್ಗೆ ಬಿ.ಸಿ.ರೋಡು-ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ನಡೆದಿದೆ. ಓಮ್ನಿ ಕಾರು ಚಾಲಕ ರಾಯಿಸನ್ ಹಾಗೂ ಜೊತೆಯಲ್ಲಿ ಮಕ್ಕಳು ಸಹಿತ ಮೂರು ಜನ ಹಾಗೂ ಸ್ವಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೂ ಗಾಯವಾಗಿದೆ.














