ಯುವತಿಯ ವಿಡಿಯೋ ಚಿತ್ರೀಕರಣ ಘಟನೆ ಖಂಡಿಸಿ ಬಿಜೆಪಿ ಪ್ರತಿಭಟನೆ ; , ಭಾರೀ ಪೊಲೀಸ್ ಬಂದೋಬಸ್ತ್ –ಕಹಳೆ ನ್ಯೂಸ್

ಉಡುಪಿ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಯುವತಿಯ ವಿಡಿಯೋ ಚಿತ್ರೀಕರಣ ಮಾಡಿರುವ ಘಟನೆ ಖಂಡಿಸಿ ಹಾಗೂ ಸಂತ್ರಸ್ತ ಯುವತಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಇಂದು ಕರೆಕೊಟ್ಟಿರುವ ಬಹೃತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಕಡಿಯಾಳಿ ಬಿಜೆಪಿ ಕಚೇರಿ ಮುಂದೆ ಸಾವಿರಾರು ಕಾರ್ಯಕರ್ತರು ಜಮಾಯಿಸಿದ್ದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಮುಂಜಾಗೃತ ಕ್ರಮವಾಗಿ ಬಿಜೆಪಿ ಕಚೇರಿ ಸುತ್ತಮುತ್ತ ಹಾಗೂ ಮೆರವಣಿಗೆ ಸಾಗುವ ರಸ್ತೆಯುದ್ಧಕ್ಕೂ ಬೀಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.











