Monday, March 9, 2026
ಪುತ್ತೂರುಸುದ್ದಿ

ಸೌಜನ್ಯ ಕೊಲೆ ಪ್ರಕರಣ; ತಾಯಿ ಕಸುಮಾವತಿ ಉಪಸ್ಥಿತಿಯಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆರೋಪಿಗೆ ಶಿಕ್ಷೆಯಾಗುವಂತೆ ಸಾಮೂಹಿಕ ಪ್ರಾರ್ಥನೆ – ಕಹಳೆ ನ್ಯೂಸ್

ಪುತ್ತೂರು : 2011 ರಲ್ಲಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಪುತ್ತೂರು ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳದಿAದ ಇಂದು ಪುತ್ತೂರಿನಲ್ಲಿ ಕಾಲ್ನಡಿಗೆ ಮತ್ತು ಸಾಮೂಹಿಕ ಪ್ರಾರ್ಥನೆ ನಡೆಸಲಾಯಿತು.

ಬೆಳಿಗ್ಗೆ ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿ ನಂತರ ಅಲ್ಲಿಂದ ಕಾಲ್ನಡಿಗೆ ಮೂಲಕ ಮುಖ್ಯರಸ್ತೆಯಾಗಿ ಸಾಗಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲಾಯಿತು. ಸಾಮೂಹಿಕ ಪ್ರಾರ್ಥನೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಜೊತೆ ಮಾಜಿ ಶಾಸಕ ಸಂಜೀವ ಮಠಂದೂರು, ಬಜರಂಗದಳ ವಿಭಾಗ ಸಹಸಂಯೋಜಕ ಮುರಳಿಕೃಷ್ಣ ಹಸಂತಡ್ಕ, ವಿಹಿಂಪ ಜಿಲ್ಲಾ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ, ಕಾರ್ಯದರ್ಶಿ ಸತೀಶ್ ಭಟ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಸಹಿತ ನೂರಾರು ಮಂದಿ ಭಾಗವಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು