Monday, March 9, 2026
ಬಂಟ್ವಾಳಸುದ್ದಿ

ವೀರಕಂಬ ಗ್ರಾಮದ ಕೆಲಿಂಜ ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಹಾಗೂ ಪೋಷನ್ ಅಭಿಯಾನ ಕಾರ್ಯಕ್ರಮದಡಿಯಲ್ಲಿ ನಡೆದ ಆಟಿಯ ಕೂಟ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇಲಾಖೆ, ಅಂಗನವಾಡಿ ಕೇಂದ್ರ ಕೆಲಿಂಜ ಇವುಗಳ ಆಶ್ರಯದಲ್ಲಿ ಸ್ತನ್ಯಪಾನ ಹಾಗೂ ಪೋಷನ್ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಆಟಿಯ ಕೂಟ ಕಾರ್ಯಕ್ರಮ ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಕೆಲಿಂಜ ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಚಿತ್ರಾಕ್ಷಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ವಿಟ್ಲ ಸಮುದಾಯ ಕೇಂದ್ರದ ವೀರಕಂಬ ಗ್ರಾಮ ವ್ಯಾಪ್ತಿಯ ಆರೋಗ್ಯ ಸುರಕ್ಷಣಾಧಿಕಾರಿ ಶ್ರೀಮತಿ ಜ್ಯೋತಿ ಕೆ ಎನ್ ಸ್ತನ್ಯಪಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ವೀರಕಂಬ ಗ್ರಾಮ ಎನ್.ಆರ್.ಎಲ್.ಎಂ ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ ಶ್ರೀಮತಿ ಮಲ್ಲಿಕಾ ಶೆಟ್ಟಿ ಆಟಿ ತಿಂಗಳಲ್ಲಿ ಬಳಸುವ ಆಹಾರ ಹಾಗೂ ಅವುಗಳು ಉಪಯೋಗಗಳ ಬಗ್ಗೆ ಮಾಹಿತಿ ಹಂಚಿಕೊಂಡರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕೆಲಿಂಜ ಸರಕಾರಿ ಪ್ರಾಥಮಿಕ ಶಾಲೆಯ ಕೆ.ಜಿ ಶಿಕ್ಷಕಿ ಶ್ರೀಮತಿ ಪ್ರಣಿತ ಪೌಷ್ಟಿಕ ಆಹಾರಗಳು ಹಾಗೂ ಅವುಗಳ ಉಪಯೋಗಗಳ ಬಗ್ಗೆ ಮಾಹಿತಿ ನೀಡಿದರು. ಸ್ತ್ರೀ ಶಕ್ತಿ ಸದಸ್ಯರುಗಳು ತಮ್ಮ ತಮ್ಮ ಮನೆಯಲ್ಲಿ ಆಟಿ ತಿಂಗಳಲ್ಲಿ ಉಪಯೋಗಿಸುವ ತಿಂಡಿ ತಿನಸುಗಳನ್ನು ತಯಾರಿಸಿ ತಂದು ಪ್ರದರ್ಶನಕ್ಕೆ ಇಟ್ಟು ಪರಸ್ಪರ ಹಂಚಿಕೊಂಡು ಸಂಭ್ರಮಿಸಿದರು.

ಜಾಹೀರಾತು
ಜಾಹೀರಾತು