Sunday, June 21, 2026
ಸುದ್ದಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ ಶಿವ ದೇವಾಲಯ ಕುಸಿತ: 16 ಸಾವು – ಕಹಳೆ ನ್ಯೂಸ್

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ ಎರಡು ಪ್ರತ್ಯೇಕ ಘಟನೆಗಳಲ್ಲಿ ಕಳೆದ 24 ಗಂಟೆಗಳಲ್ಲಿ 16 ಜನರು ಸಾವನ್ನಪ್ಪಿದ್ದಾರೆ.

ಜಾಹೀರಾತು


ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ರಾತ್ರಿ ಸೋಲನ್ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದದಿಂದ ಏಳು ಮಂದಿ ಸಾವನ್ನಪ್ಪಿದ್ದಾರೆ. ಮೃತರನ್ನ ಹರ್ನಾಮ್ (38), ಕಮಲ್ ಕಿಶೋರ್ (35), ಹೇಮಲತಾ (34), ರಾಹುಲ್ (14), ನೇಹಾ (12), ಗೋಲು (8), ಮತ್ತು ರಕ್ಷಾ (12) ಎಂದು ಗುರುತಿಸಲಾಗಿದೆ.
ಇನ್ನು ಶಿಮ್ಲಾ ನಗರದ ಸಮ್ಮರ್ ಹಿಲ್ ಪ್ರದೇಶದ ಶಿವ ದೇವಾಲಯದಲ್ಲಿ ಉಂಟಾದ ಭೂಕುಸಿತದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಸಾವನ್ನಪ್ಪಿದವರಿಗೆ ಟ್ವೀಟ್‌ನಲ್ಲಿ ಸಂತಾಪ ಸೂಚಿಸಿದ್ದಾರೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ನೆರವು ಮತ್ತು ಬೆಂಬಲವನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.