Saturday, March 14, 2026
ಸುದ್ದಿ

ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡ ಮಹಿಳೆ ಸಾವು – ಕಹಳೆ ನ್ಯೂಸ್

ಹಾಸನ : ಕಾಡಾನೆ ದಾಳಿಗೆ ಮತ್ತೋರ್ವ ಮಹಿಳೆ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಸಕಲೇಶಪುರದ ಕುನಿಗನಹಳ್ಳಿ ಗ್ರಾಮ ಪಂಚಾಯಿತಿಯ ವಡೂರಿನ ಕವಿತಾ (40) ಮೃತಪಟ್ಟಿದ್ದು, ಗಂಡನ ಮನೆ ನಾರ್ವೆಯಿಂದ ತಾಯಿ ಮನೆಗೆ ಬಂದಿದ್ದ ಕವಿತಾ, ಗುರುವಾರ ಬೆಳಿಗ್ಗೆ ಮನೆಯ ಹಿಂಭಾಗ ತೋಟಕ್ಕೆ ತೆರಳಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಏಕಾಏಕಿ ಮಹಿಳೆ ಮೇಲೆ ಕಾಡಾನೆ ದಾಳಿ ಮಾಡಿದೆ. ಪ್ರಜ್ಞಾಹೀನವಾಗಿ ಬಿದ್ದಿದ್ದ ಮಹಿಳೆಯನ್ನು ಗಮನಿಸಿ ಕೂಡಲೇ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು