Recent Posts

Sunday, September 13, 2026
ಸುದ್ದಿ

ಕ್ಷಯ ರೋಗದಿಂದ ಬಳಲುತ್ತಿದ್ದ ವ್ಯಕ್ತಿ ವಿಮಾನದಲ್ಲಿ ರಕ್ತ ಕಕ್ಕಿ ಸಾವು – ಕಹಳೆ ನ್ಯೂಸ್

ನಾಗ್ಪುರ: ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರು ರಕ್ತ ವಾಂತಿ ಮಾಡಿ ಮೃತಪಟ್ಟಿರುವ ಘಟನೆ ನಾಗ್ಪುರದಲ್ಲಿ ನಡೆದಿದೆ.

ಜಾಹೀರಾತು

ಮುಂಬೈಯಿಂದ ರಾಂಚಿಗೆ ತೆರಳುತ್ತಿದ್ದ ದೇವಾನಂದ್ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಇದ್ದಕ್ಕಿದ್ದಂತೆ ರಕ್ತ ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕೂಡಲೇ ಸಿಬ್ಬಂದಿಗಳು ವಿಮಾನಯಾನ ಸಂಸ್ಥೆಗೆ ಮಾಹಿತಿ ನೀಡಿ ವಿಮಾನವನ್ನು ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿಸಿ ಪ್ರಯಾಣಿಕನನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದು, ಈ ವೇಳೆ ತಪಾಸಣೆ ನಡೆಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಕ್ಷಯ ರೋಗದಿಂದ ಬಳಲುತ್ತಿದ್ದ ದೇವಾನಂದ್ ಇದೆ ಕಾರಣದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ನಿಖರ ಕಾರಣ ತಿಳಿದು ಬರಲಿದೆ.