Thursday, March 19, 2026
ಸುದ್ದಿ

ಉದ್ದ ಜಿಗಿತದಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ ಮಟ್ಟಕ್ಕೆ ಆಯ್ಕೆಯಾದ ಸುಶಾನ್ ಸುವರ್ಣ ಅವರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಭಿನಂದನೆ – ಕಹಳೆ ನ್ಯೂಸ್

ಕರ್ನಾಟಕ ರಾಜ್ಯ ಜೂನಿಯರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಉದ್ದ ಜಿಗಿತದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ ಮಟ್ಟಕ್ಕೆ ಆಯ್ಕೆಯಾದ ಕಾಪು ವಿಧಾನಸಭಾ ಕ್ಷೇತ್ರದ ಬೆಳ್ಳಂಪಳ್ಳಿ ನಿವಾಸಿ ಸುಶಾನ್ ಸುವರ್ಣ ಅವರನ್ನು ಮಹಾಲಕ್ಷ್ಮಿ ಭಜನಾ ಮಂಡಳಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಅಭಿನಂದಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಬೆಳ್ಳಂಪಳ್ಳಿ ಮೋಗವೀರ ಗ್ರಾಮಸಭಾ ಅಧ್ಯಕ್ಷರಾದ ಸುಧಾಕರ್ ಕಾಂಚನ್, ಮಹಾಲಕ್ಷ್ಮಿ ಭಜನಾ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಕಾಂಚನ್, ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಪ್ರವೀಣ್ ಶೆಟ್ಟಿ, ಬೆಳ್ಳಂಪಳ್ಳಿ ಮೋಗವೀರ ಗ್ರಾಮಸಭಾ ಮಾಜಿ ಅಧ್ಯಕ್ಷರಾದ ಬಾಲು ಕೋಟ್ಯಾನ್, ಉದ್ಯಮಿಗಳಾದ ದಿಲೇಶ್ ಶೆಟ್ಟಿ, ಸುಶಾನ್ ಅವರ ಕುಟುಂಬದವರಾದ ಮುದ್ದು ಕೋಟ್ಯಾನ್, ಆನಂದಿ ಸುವರ್ಣ ಹಾಗೂ ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು