Saturday, March 14, 2026
ಸುದ್ದಿ

ಉಡುಪಿ ಜಿಲ್ಲಾಸ್ಪತ್ರೆಗೆ ಸಚಿವೆ ಶೋಭಾ ಕರಂದ್ಲಾಜೆ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭೇಟಿ – ಕಹಳೆ ನ್ಯೂಸ್

ಕಾಪು : ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರು, ಸಂಸದರಾದ ಶೋಭಾ ಕರಂದ್ಲಾಜೆ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉಡುಪಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದರು.

ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಘಟಕದಲ್ಲಿ ಕೆಲ ದಿನಗಳಿಂದ ಡಯಾಲಿಸಿಸ್ ಚಿಕಿತ್ಸೆ ಸ್ಥಗಿತಗೊಳಿಸಲಾಗಿದ್ದು ಇದರಿಂದ ರೋಗಿಗಳು ಚಿಕಿತ್ಸೆ ಇಲ್ಲದೆ ಪರದಾಡುವಂತಾಗಿದೆ. ಯಾವುದೇ ಮಾಹಿತಿ ನೀಡದೆ ಡಯಾಲಿಸಿಸ್ ಚಿಕಿತ್ಸೆ ಸ್ಥಗಿತಗೊಳಿಸಿದ ಏಜೆನ್ಸಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಕೇಂದ್ರ ಸಚಿವರು ಸೂಚಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾ ಪ್ರಭಾರಿ ಶಸ್ತ್ರಚಿಕಿತ್ಸಕರಾದ ವೀಣಾ ಹಾಗೂ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು