Saturday, September 19, 2026
ಸುದ್ದಿ

ವಿವೇಕಾನಂದ ಪದವಿ ಕಾಲೇಜಿನಲ್ಲಿ ನಶಾಮುಕ್ತ ಭಾರತ ಅಭಿಯಾನ – ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಕೆಡೆಟ್ ಕಾಪ್ರ್ಸ್, ರಾಷ್ಟ್ರೀಯ ಸೇವಾ ಯೋಜನೆ, ರೋವರ್ ಮತ್ತು ರೇಂಜರ್ಸ್, ಯೂತ್ ರೆಡ್ ಕ್ರಾಸ್ ಘಟಕ ಹಾಗೂ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ನಶಾಮುಕ್ತ ಭಾರತ ಅಭಿಯಾನದ ಜಾಥಾ ಮತ್ತು ಮಾಹಿತಿ ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿ ಪುತ್ತೂರು ಸಬ್-ಡಿವಿಷನ್‍ನ ಡಿವೈಎಸ್‍ಪಿ ಪ್ರಮೋದ್ ಕುಮಾರ್ ಮಾತನಾಡಿ, ಭಾರತದಲ್ಲಿ ಸ್ವಾತಂತ್ರ್ಯಪೂರ್ವದಲ್ಲಿ ಬಡತನ ಕಾಡುತ್ತಿತ್ತು. ಈಗ ಎಲ್ಲಾ
ಕ್ಷೇತ್ರಗಳಲ್ಲೂ ಭಾರತ ಮುಂದಿದೆ. ಆದರೆ ಇಂದು ಮಾದಕ ವ್ಯಸನವು ಸಮಾಜದ ಏಳಿಗೆಗೆ ಮಾರಕವಾಗುತ್ತಿದೆ. ಯುವಜನತೆ ಡ್ರಗ್ಸ್ ಸೇವನೆಗೆ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ.
ಇದು ಪ್ರತಿಯೊಬ್ಬರ ವೈಯಕ್ತಿಕ ಮತ್ತು ಸಾಮಾಜಿಕ ಜೀವನಕ್ಕೆ ಹಾನಿ ಉಂಟುಮಾಡುತ್ತಿದೆ. ಕ್ಷಣಿಕ ಸಮಯದ ಸುಖಕ್ಕಾಗಿ ಯುವಜನತೆ ಮಾದಕ ವ್ಯಸನಕ್ಕೆ ಒಳಗಾಗಬಾರದು ಎಂದು
ಹೇಳಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಕೆಡೆಟ್ ಕಾಪ್ರ್ಸ್, ರಾಷ್ಟ್ರೀಯ ಸೇವಾ ಯೋಜನೆ, ರೋವರ್ ಮತ್ತು ರೇಂಜರ್, ಯೂತ್ ರೆಡ್ ಕ್ರಾಸ್ ಹಾಗೂ ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು ಮತ್ತು ಅಧಿಕಾರಿಗಳು ವಿವೇಕಾನಂದ ಪದವಿ ಕಾಲೇಜಿನ ಆವರಣದಿಂದ ನೆಹರು ನಗರದ ವರೆಗೆ ಮಾದಕ ವ್ಯಸನದ ಕುರಿತು ಜಾಗೃತಿ ಜಾಥಾ ನಡೆಸಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ರಾಷ್ಟ್ರೀಯ ಸ್ಟೂಡೆಂಟ್ ಕಾಪ್ರ್ಸ್ ನ ಅಧಿಕಾರಿ ಲೆ. ಭಾಮಿ ಅತುಲ್ ಶೆಣೈ, ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ವಿದ್ಯಾ ಕೆ. ಎನ್., ಯೂತ್ ರೆಡ್ ಕ್ರಾಸ್‍ನ ಸಂಯೋಜಕ ಸುಹಾಸ್ ಕೃಷ್ಣ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕಿ ಚೈತನ್ಯ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು