ಕೊಪ್ಪಳ |ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ; 35 ಟನ್ ರೇಷನ್ ಸಾಗಿಸ್ತಿದ್ದ ಲಾರಿ ವಶಕ್ಕೆ-ಕಹಳೆ ನ್ಯೂಸ್
ಕೊಪ್ಪಳ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆ ಭ್ರಷ್ಟರ ಪಾಲಾಗುತ್ತಿದೆ ಎಂದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಬಡವರ ಹೊಟ್ಟೆ ಸೇರಬೇಕಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಳ್ಳರು ಅಕ್ರಮವಾಗಿ ಕದ್ದು ಮಾರಾಟ ಮಾಡಲು ಮುಂದಾದ ಲಾರಿಯನ್ನು ಕೊಪ್ಪಳದ ಮುನಿರಾಬಾದ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ 16 ರಂದು ಬೆಳಗಿನ ಜಾವ ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದ ಬಳಿ ಪೊಲೀಸರು ಲಾರಿಯನ್ನು ತಡೆಯುತ್ತಿದ್ದಂತೆ ಚಾಲಕ ಲಾರಿಯನ್ನ ರಸ್ತೆಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಸದ್ಯ...







