ಆರ್‌ಎಸ್‌ಎಸ್ ಪಥಸಂಚಲನ ನಿರಾತಂಕ ; ರಾಜ್ಯ ಸರಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ-ಕಹಳೆ ನ್ಯೂಸ್
ಬೆಂಗಳೂರು: ಸರಕಾರಿ ಸ್ಥಳಗಳಲ್ಲಿ ಖಾಸಗಿ ಸಂಘಸಂಸ್ಥೆಗಳು ಕಾರ್ಯಕ್ರಮ ನಡೆಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂಬ ರಾಜ್ಯ ಸರಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇದರೊಂದಿಗೆ, ಚಿತ್ತಾಪುರ ಸೇರಿದಂತೆ ರಾಜ್ಯಾದ್ಯಂತ ರಾಷ್ಟ್ರೀಯ ಸ್ವಯಸೇವಕ ಸಂಘ ನಡೆಸಲು ಉದ್ದೇಶಿಸಿದ್ದ ಪಥಸಂಚಲನಗಳಿಗೆ ಉಂಟಾಗಿದ್ದ ತಡೆ ತೆರವಾಗಿದೆ. 2013ರ ಬಿಜೆಪಿ ಸರ್ಕಾರದ ಆದೇಶವನ್ನೇ ಮುಂದಿಟ್ಟು ರಾಜ್ಯ ಸರ್ಕಾರ ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನು ನಡೆಸಲು ಪೂರ್ವಾನುಮತಿ ಕಡ್ಡಾಯ ಮಾಡಿ ಹೊಸ...







