ಚಂಡಮಾರುತ ಪೀಡಿತ ಶ್ರೀಲಂಕಾಕ್ಕೆ ; ಅವಧಿ ಮುಗಿದ ಆಹಾರ ಸಾಮಗ್ರಿ ಕಳಿಸಿದ ಪಾಕ್-ಕಹಳೆ ನ್ಯೂಸ್
ಇಸ್ಲಾಮಾಬಾದ್: ದಿತ್ವಾ ಚಂಡಮಾರುತದಿಂದ ತತ್ತರಿಸಿರುವ ಶ್ರೀಲಂಕಾಗೆ ಪಾಕಿಸ್ತಾನ ಒಂದು ವರ್ಷದ ಅವಧಿ ಮುಗಿದ ಆಹಾರ ಸಾಮಗ್ರಿಗಳನ್ನು ಕಳುಹಿಸುವ ಮೂಲಕ ವಿವಾದಕ್ಕೆ ಸಿಲುಕಿದೆ. ಆಹಾರ ಸಾಮಗ್ರಿಗಳನ್ನು ವಾಯು ಮತ್ತು ಸಮುದ್ರದ ಮೂಲಕ ರವಾನಿಸಲಾಯಿತು. ಶ್ರೀಲಂಕಾಗೆ ನೆರವು ನೀಡಲಾಗಿದೆ ಎಂದು ಪಾಕಿಸ್ತಾನ ಫೋಟೊ ಜೊತೆ ಪೋಸ್ಟ್ ಹಂಚಿಕೊಂಡಿತ್ತು. ಪಾಕ್ ಕಳುಹಿಸಿರುವ ವೈದ್ಯಕೀಯ ಮತ್ತು ಆಹಾರ ಸಾಮಗ್ರಿಗಳಲ್ಲಿ ಬಳಸಲು ಉಪಯುಕ್ತವಲ್ಲದ ಅವಧಿ ಮೀರಿದ ವಸ್ತುಗಳು ಸೇರಿವೆ ಎಂಬುದು ಬಹಿರಂಗಗೊಂಡಿದೆ. ಪಾಕಿಸ್ತಾನ ಹೈಕಮಿಷನ್ ಶ್ರೀಲಂಕಾ ಹಂಚಿಕೊಂಡ...







