ಆಸ್ಟ್ರೇಲಿಯಾದಲ್ಲಿ ಮತ್ತೊಂದು ಕ್ರಿಕೆಟ್ ದುರಂತ ; ಅಭ್ಯಾಸದ ವೇಳೆ ಚೆಂಡು ಬಡಿದು ಯುವ ಕ್ರಿಕೆಟಿಗ ಸಾವು-ಕಹಳೆ ನ್ಯೂಸ್
ಸಿಡ್ನಿ: ಕ್ರಿಕೆಟ್ ಅಭ್ಯಾಸದ ವೇಳೆ ಚೆಂಡು ತಲೆಗೆ ತಗಲಿ ಯುವ ಕ್ರಿಕೆಟಿಗನೊಬ್ಬ ಮೃತಪಟ್ಟ ದಾರುಣ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ. ಸ್ಥಳೀಯ ಫೆರ್ನ್‌ಟ್ರೀ ಗಲ್ಲಿ ಕ್ರಿಕೆಟ್ ಕ್ಲಬ್‌ನಲ್ಲಿ ತಾಲೀಮು ನಡೆಸುತ್ತಿದ್ದ 17 ವರ್ಷದ ಬೆನ್ ಆಸ್ಟಿನ್ ಮೃತಪಟ್ಟ ಬಾಲಕ. 2014ರಲ್ಲಿ ಆಸ್ಟ್ರೇಲಿಯಾದ ಫಿಲಿಪ್ ಹ್ಯೂಸ್ ಅವರು ಸೀನ್ ಅಬಾಟ್ ಅವರ ಬೌನ್ಸರ್ ಅನ್ನು ಎದುರಿಸುವ ಸಂದರ್ಭದಲ್ಲಿ ಚೆಂಡು ಕುತ್ತಿಗೆಗೆ ಬಡಿದು ಮೃತಪಟ್ಟಿದ್ದರು. ಇದೇ ರೀತಿಯ ಮತ್ತೊಂದು ದುರಂತ ಘಟನೆ ಸಂಭವಿಸಿದ್ದು ಕ್ರಿಕೆಟ್...







