ಸರ್ಕಾರಕ್ಕೆ ಆಭಾರಿ, ಎಸ್‌ಐಟಿ ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ ; ವೀರೇಂದ್ರ ಹೆಗ್ಗಡೆ- ಕಹಳೆ ನ್ಯೂಸ್
ಮಂಗಳೂರು: ಸರ್ಕಾರಕ್ಕೆ ನಾನು ಆಭಾರಿ, ಎಸ್‌ಐಟಿ ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ಕೋವಿಡ್ ಹಾಗೂ ಈಗ ಅನೇಕ ಪುಸ್ತಕಗಳನ್ನು ನಾನು ಓದುತ್ತಿದ್ದೇನೆ. ಸಿದ್ದಗಂಗಾ ಶ್ರೀಗಳ ಹಲವು ಪುಸ್ತಕ ನಾನು ಓದಿದ್ದೇನೆ. ನಮ್ಮನ್ನ ಹೊಗಳಿದ್ದೀರಿ, ಆದರೆ ನಮ್ಮ ಸೇವೆ ಧರ್ಮ ನಮಗೆ ಮುಖ್ಯ ಅಂತ ಇದೆ. ಸಿದ್ದಗಂಗಾ ಶ್ರೀಗಳು 108 ವರ್ಷ ಬದುಕಿದವರು ಹೇಳಿದ ಮಾತು. ಶತ್ರುತ್ವ...







