ALVA’S PRAGATI 2026 | ಆ. 7, 8ರಂದು 16ನೇ ಆವೃತ್ತಿಯ ಉಚಿತ ಬೃಹತ್ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ–2026’ ; ಉಡುಪಿಯಲ್ಲಿ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಸುದ್ದಿಗೋಷ್ಠಿ – ಕಹಳೆ ನ್ಯೂಸ್
ಉಡುಪಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುತ್ತಿರುವ 16ನೇ ಆವೃತ್ತಿಯ ಉಚಿತ ಬೃಹತ್ ಉದ್ಯೋಗ ಮೇಳ 'ಆಳ್ವಾಸ್ ಪ್ರಗತಿ–2026' ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ತಿಳಿಸಿದರು. ಉಡುಪಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಈಗಾಗಲೇ 276 ಕಂಪನಿಗಳು ನೋಂದಾಯಿಸಿಕೊಂಡಿದ್ದು, 350ಕ್ಕೂ ಹೆಚ್ಚು ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದೆ. 15,860ಕ್ಕೂ ಅಧಿಕ ಉದ್ಯೋಗಾವಕಾಶಗಳು...







