ಕೇರಳದ ವಯನಾಡಿನಲ್ಲಿ ಭಾರೀ ಭೂ ಕುಸಿತ : ಸಾವಿನ ಸಂಖ್ಯೆ 20ಕ್ಕೆ ಏರಿಕೆ : ನಾಪತ್ತೆಯಾದವರ ಪತ್ತೆಗೆ ಏರ್’ಫೋರ್ಸ್ ಆಗಮನ -ಕಹಳೆ ನ್ಯೂಸ್
ಕೇರಳದ ವಯನಾಡಿನಲ್ಲಿ ಭಾರೀ ಭೂ ಕುಸಿತವಾಗಿದ್ದು 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ವೈತಿರಿ ತಾಲ್ಲೂಕಿನ ಮೆಪ್ಪಾಡಿ ಪಂಚಾಯತ್ನಲ್ಲಿ ಮಂಗಳವಾರ ಮುಂಜಾನೆ 3.49 ರ ಸುಮಾರಿಗೆ ಭೂಕುಸಿತ ಸಂಭವಿಸಿದೆ. ಅಗ್ನಿಶಾಮಕ ಮತ್ತು ಪಾರುಗಾಣಿಕಾ, ನಾಗರಿಕ ರಕ್ಷಣೆ, ಎನ್ಡಿಆರ್ಎಫ್ ಮತ್ತು ಸ್ಥಳೀಯ ತುರ್ತು ಪ್ರತಿಕ್ರಿಯೆ ತಂಡಗಳ 250 ಸದಸ್ಯರು ವಯನಾಡ್ನ ಚುರಲ್ಮಾಲಾದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಎನ್ಡಿಆರ್ಎಫ್ನ ಹೆಚ್ಚುವರಿ ತಂಡಕ್ಕೆ ತಕ್ಷಣ ಸ್ಥಳಕ್ಕೆ ತಲುಪಲು ನಿರ್ದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....



