ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!- ಕಹಳೆ ನ್ಯೂಸ್
ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷಿತ ನಗರದಲ್ಲಿ ಜು.14ರ ಮಂಗಳವಾರ ಸಂಜೆ ಸಂಭವಿಸಿದೆ. ಹುಬ್ಬಳ್ಳಿ ಮೂಲದ ವಿದ್ಯಾರ್ಥಿನಿ ಮಹಾಲಕ್ಷ್ಮಿ (20) ಫ್ಲಾಟ್‌ನಲ್ಲಿ ಪೋಷಕರೊಂದಿಗೆ ವಾಸವಿದ್ದರು. ಮಂಗಳವಾರ ದೇಗುಲಕ್ಕೆ ತೆರಳಿ ವಾಪಸ್ಸಾದ ಬಳಿಕ ಏಕಾಏಕಿ 5ನೇ ಅಂತಸ್ತಿಗೆ ತೆರಳಿ ಕೆಳಗೆ ಜಿಗಿದಿದ್ದಾರೆ ಎನ್ನಲಾಗಿದೆ. ಘಟನೆಯಿಂದಾಗಿ ತಲೆಗೆ ಗಂಭೀರ ಗಾಯಗಳಾದ ವಿದ್ಯಾರ್ಥಿನಿಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ...







