ಉತ್ತರ ಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ; ಇಬ್ಬರು ದುಷ್ಕರ್ಮಿಗಳಿಂದ ಅಪ್ರಾಪ್ತ ಬಾಲಕಿಗೆ ಅತ್ಯಾಚಾರ – ಬಾಲಕಿ ದೇಹವನ್ನ ಸಿಗರೇಟ್ನಿಂದ ಸುಟ್ಟ ನೀಚರು – ಕಹಳೆ ನ್ಯೂಸ್
ಗೋರಖ್ಪುರ, ಆ. 17 : ಉತ್ತರ ಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ನಡೆದಿದ್ದು ಗೋರಖ್ಪುರ ಜಿಲ್ಲೆಯಲ್ಲಿ ಗೋಲಾ ಪ್ರದೇಶದಲ್ಲಿ ಇಬ್ಬರು ದುಷ್ಕರ್ಮಿಗಳು ಅಪ್ರಾಪ್ತ ಬಾಲಕಿಗೆ ಅತ್ಯಾಚಾರ ಮಾಡಿ ಸಿಗರೇಟ್ನಿಂದ ಸುಟ್ಟಿದ್ದಾರೆ. ಬಾಲಕಿ ಭಾನುವಾರ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸದ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂತ್ರಸ್ತೆಯ ತಾಯಿ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಪೊಲೀಸರು ಡೆಹ್ರಿಬಾರ್ ಗ್ರಾಮದ ಅರ್ಜುನ್ ಮತ್ತು ಇನ್ನೊಬ್ಬ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ....







