Wednesday, March 18, 2026

ರಾಜ್ಯ

ಬೆಂಗಳೂರುರಾಜ್ಯಶಿಕ್ಷಣಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; ಉಡುಪಿ ಫಸ್ಟ್‌, ದಕ್ಷಿಣ ಕನ್ನಡ ಸೆಕೆಂಡ್‌ – ಕಹಳೆ ನ್ಯೂಸ್

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (Second PUC) ಇಂದು ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು 73.45%  ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6,37,805 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ  ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.  ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%),  ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ (73.45%)  ಪಡೆದುಕೊಂಡಿದೆ....
ರಾಜ್ಯಸುದ್ದಿ

ಪಂಜಾಬ್ ಬಿಜೆಪಿ ನಾಯಕ ಮನೋರಂಜನ್ ಕಾಲಿಯಾ ಮನೆ ಬಾಗಿಲ ಬಳಿ ಸ್ಫೋಟ-ಕಹಳೆ ನ್ಯೂಸ್

ಪಂಜಾಬ್‌ : ಪಂಜಾಬ್​ನಲ್ಲಿ ಬಿಜೆಪಿ ನಾಯಕನ ನಿವಾಸದ ಎದುರು ಭಾರಿ ಸ್ಫೋಟ ಸಂಭವಿಸಿದೆ ಆಂತಕ ಸೃಷ್ಟಿಸಿದೆ. ಮಧ್ಯರಾತ್ರಿಗಮಟೆ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಭಾರೀ ಸ್ಫೋಟಕ್ಕೆ ಗಾಢ ನಿದ್ರೆಯಲ್ಲಿದ್ದ ಜನರು ಬೆಚ್ಚಿ ಬಿದ್ದಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು ಸ್ಥಳೀಯ ಸಿಸಿಟಿವಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿದ್ದು, ಗ್ರೇನೇಡ್‌ ದಾಳಿಯೇ ಅಥವಾ ಮತ್ತಿತರ ವಸ್ತುಗಳಿಂದ ಸಂಭವಿಸಿದ ಸ್ಫೋಟವೇ ಎಂಬುದರ ಕುರಿತು ತನಿಖೆ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಶಿಕ್ಷಣಸುದ್ದಿ

ಇಂದು ರಾಜ್ಯಾದ್ಯಂತ 2025 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಮಾ.1ರಿಂದ 20ರವರೆಗೆ ನಡೆದ 2025 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಏ.8ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ತಿಳಿಸಿದೆ. ಮಂಗಳವಾರ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪ್ರಕಟಿಸಲಿದ್ದಾರೆ. ಬಳಿಕ ಮಂಡಳಿ https://karresults.nic.in/ ವೆಬ್‌ಸೈಟ್‌ನಲ್ಲಿ ಮಧ್ಯಾಹ್ನ...
ಬೆಂಗಳೂರುರಾಜ್ಯಸುದ್ದಿ

ಪೌರ ಕಾರ್ಮಿಕರಿಗೆ ಗುಡ್‌ ನ್ಯೂಸ್‌ : ಮೇ 1ರಂದು ಪೌರ ಕಾರ್ಮಿಕರ ಸೇವೆ ಕಾಯಂ: ಸಿಎಂ ಘೋಷಣೆ-ಕಹಳೆ ನ್ಯೂಸ್

ಬೆಂಗಳೂರು: ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ...
ಉಡುಪಿಉತ್ತರಕನ್ನಡಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಬೆಳಗಾವಿಮಂಗಳೂರುಮಡಿಕೇರಿಮಂಡ್ಯರಾಜ್ಯಶಿವಮೊಗ್ಗಸುದ್ದಿಹಾಸನಹೆಚ್ಚಿನ ಸುದ್ದಿ

ರಾಜ್ಯದಲ್ಲಿ  ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆ : ಈ ಜಿಲ್ಲೆಗಳಲ್ಲಿ ‘ಯೆಲ್ಲೊ’ ಅಲರ್ಟ್ ಘೋಷಿಸಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಾಗಾಗಿ ರಾಜ್ಯದ ಈ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತಿನಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 'ಎಲ್ಲೋ' ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ...
ದಕ್ಷಿಣ ಕನ್ನಡರಾಜ್ಯಸುದ್ದಿ

ರಾಮ ಪರ್ವದ ಪ್ರಯುಕ್ತ ಕೋಡಿ ಕನ್ಯಾಣದ ಶ್ರೀರಾಮ ಗೆಳೆಯರ ಬಳಗ (ರಿ.), ದಿಂದ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಶ್ರೀರಾಮ ಗೆಳೆಯರ ಬಳಗ (ರಿ.), ಕೋಡಿ ಕನ್ಯಾಣ ಇವರ ತೃತೀಯ ವರ್ಷದ ರಾಮ ಪರ್ವದ ಪ್ರಯುಕ್ತ ನಡೆದ ರಕ್ತದಾನ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೋಡಿ ಕನ್ಯಾಣದಲ್ಲಿ ಶತಕದ ಗಡಿ ದಾಟಿ ಯಶಸ್ವಿಯಾಗಿ ನಡೆಯಿತು. ಶಿಬಿರದಲ್ಲಿ 120 ಕ್ಕೂ ಹೆಚ್ಚು ರಕ್ತದಾನಿಗಳು ಭಾಗವಹಿಸಿ ಅತ್ಯುತ್ಸಾಹ ಪ್ರದರ್ಶಿಸಿದರು. ಹಿಂದಿನ ವರ್ಷಗಳಂತೆ, ಈ ಶಿಬಿರವೂ ಉತ್ತಮ ಪ್ರತಿಕ್ರಿಯೆ ಪಡೆದು, ದಾನಿಗಳು ಹಾಗೂ ಸಹಾಯಕರಿಂದ ಭರ್ಜರಿ ಬೆಂಬಲವನ್ನು ಪಡೆದಿತು. ತಮ್ಮ ಅಮೂಲ್ಯ ಕೊಡುಗೆಗಾಗಿ,...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಮಂಗಳೂರುರಾಜ್ಯಸುದ್ದಿ

ಸೌಜನ್ಯ ಪ್ರಕರಣ : ಧರ್ಮಸ್ಥಳದಲ್ಲಿ ನಡೆಸಲು ನಿರ್ಧರಿಸಲಾಗಿದ್ದ ಏ.6ರ ಹಕ್ಕೊತ್ತಾಯ ಸಭೆಗೆ ಆರಂಭದಲ್ಲಿ ಹೈಕೋರ್ಟ್ ಅನುಮತಿ : ವಾಟ್ಸಪ್ ಸಂದೇಶಗಳ ಗಂಭೀರತೆಯರಿತು ತಾತ್ಕಾಲಿಕ ತಡೆ – ಕಹಳೆ ನ್ಯೂಸ್

ಪುತ್ತೂರು:ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ಏ.೬ರಂದು ಧರ್ಮಸ್ಥಳದಲ್ಲಿ ನಡೆಸಲು ನಿರ್ಧರಿಸಲಾಗಿದ್ದ ಬೃಹತ್ ಹಕ್ಕೊತ್ತಾಯ ಸಭೆ, ಪ್ರತಿಭಟನೆಗೆ ಕರ್ನಾಟಕ ಹೈಕೋರ್ಟ್ ಆರಂಭದಲ್ಲಿ ಅನುಮತಿ ನೀಡಿದ್ದರೂ, ಈ ಸಂಬಂಧ ವಾಟ್ಸಪ್ ಮೂಲಕ ರವಾನೆಯಾಗುತ್ತಿದ್ದ ಸಂದೇಶಗಳ ಗಂಭೀರತೆಯರಿತ ನ್ಯಾಯಪೀಠ ಪ್ರತಿಭಟನೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ಮೊದಲು , ನ್ಯಾಯಾಲಯ ಶಾಂತಿಯುತ ಪ್ರತಿಭಟನೆಗೆ ಅನುಮತಿ ನೀಡಿತ್ತು. ಆದರೆ ಹೊಸ ವಾಟ್ಸಾಪ್ ಸಂದೇಶಗಳು ಬಹುಸಂಖ್ಯೆಯಲ್ಲಿ ಜನರನ್ನು ಕರೆಸಿಕೊಂಡು ದೇವಸ್ಥಾನದಲ್ಲಿ ಪ್ರವೇಶಿಸುವ ಯತ್ನಗಳ ಬಗ್ಗೆ ಸೂಚನೆ ನೀಡಿವೆ. ಹೀಗಾಗಿ,...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಂಗಳೂರುರಾಜ್ಯಸುದ್ದಿ

ಉಪ್ಪಿನಂಗಡಿ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ; ಓರ್ವ ಮೃತ್ಯು, ಹತ್ತಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ – ಕಹಳೆ ನ್ಯೂಸ್

ಉಪ್ಪಿನಂಗಡಿ ಏ.04  : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, ಹತ್ತಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೀರಕಟ್ಟೆ ಎಂಬಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ ನೀರಕಟ್ಟೆಯ ಅಪಾಯಕಾರಿ ತಿರುವನ್ನು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಬಸ್ಸಿನಡಿ ಸಿಲುಕಿ ಮೃತಪಟ್ಟಿದ್ದು, ಹತ್ತಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ....
1 98 99 100 101 102 274
Page 100 of 274