ಭಾರತ – ಪಾಕ್ ಗಡಿಯಲ್ಲಿ 3 AK-47, 2 ಪಿಸ್ತೂಲ್, ಮದ್ದುಗುಂಡುಗಳು ಪತ್ತೆ – ಪೊಲೀಸರಿಂದ ತೀವ್ರ ಶೋಧ – ಕಹಳೆ ನ್ಯೂಸ್
ಜೈಪುರ್: ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ 3 AK-47, 2 ಪಿಸ್ತೂಲ್ ಹಾಗೂ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ಪಂಜಾಬ್‌ನ ಪಠಾಣ್‌ಕೋಟ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ನರೋತ್ ಜೈಮಲ್ ಸಿಂಗ್ ಗಡಿ ಪ್ರದೇಶದಲ್ಲಿ ಪಂಜಾಬ್‌ನ ಪಠಾಣ್‌ಕೋಟ್ ಪೊಲೀಸರು ಹಾಗೂ ಕೇಂದ್ರ ಗುಪ್ತಚರ ಅಧಿಕಾರಿಗಳು ಶೋಧ ನಡೆಸಿದ್ದರು. ಈ ವೇಳೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಶಾಂತಿ ಕದಡಲು ಪಾಕಿಸ್ತಾನದಿಂದ ಈ ಶಸ್ತ್ರಾಸ್ತ್ರಗಳನ್ನು ಕಳುಹಿಸಲಾಗಿದೆ ಎಂದು ಶಂಕಿಸಲಾಗಿದೆ. ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಲ್ಲಿ 3 ಎಕೆ...







