ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ – ಕಹಳೆ ನ್ಯೂಸ್
ಬೆಂಗಳೂರು: ಸಂಕ್ರಾಂತಿ ಹಬ್ಬದ ದಿನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಮಕರ ಸಂಕ್ರಾಂತಿ ಸಂಭ್ರಮದ ನಡುವೆ ಚಿಕ್ಪೇಟೆಯಲ್ಲಿರುವ ಬಳೇಪೇಟೆಯಲ್ಲಿ ದೇವಸ್ಥಾನದ ಮುಂದೆ ಹಚ್ಚಿದ ಪಟಾಕಿ ಕಿಡಿಯಿಂದ ಅಗ್ನಿ ಅವಘಡ ಸಂಭವಿಸಿದ್ದು ಕೆಲಕಾಲ ಆತಂಕ ಮನೆ ಮಾಡಿತ್ತು. ಹಬ್ಬದ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ದೇವಾಲಯದ ಮುಂದೆ ಆಯೋಜಕರು ಹುಲ್ಲು, ಹೂವು...







