ಹಾಲು ಉತ್ಪಾದಕರ ಪ್ರೋತ್ಸಾಹ ಧನ 716 ಕೋಟಿ ತಕ್ಷಣ ಬಿಡುಗಡೆ ಮಾಡಿ – ಯಡಿಯೂರಪ್ಪ ಸಿಎಂ ಆಗಿದ್ದಾಗ ಹಾಲು ಉತ್ಪಾದಕರಿಗೆ ನೀಡಿದ ಪ್ರೋತ್ಸಾಹ ಧನ ತಡೆ, ಕಾಂಗ್ರೆಸ್ ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – ಕಹಳೆ ನ್ಯೂಸ್
ಬೆಂಗಳೂರು: ಹಾಲು ಉತ್ಪಾದಕರ ಪ್ರೋತ್ಸಾಹ ಧನ 716 ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆ ಮಾಡಬೇಕು. ಇಲ್ಲದೇ ಇದ್ದರೆ ರೈತರು ಜಾನುವಾರು ಸಮೇತ ಸರ್ಕಾರದ ವಿರುದ್ಧ ತಿರುಗಿ ಬೀಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದರು. ತಮ್ಮ ನಿವಾಸದ ಬಳಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುತ್ತಿದ್ದರು. ಅದರ ಪರಿಣಾಮ ಬಿಜೆಪಿ ಆಡಳಿತದಲ್ಲಿದ್ದಾಗ 26 ಲಕ್ಷ ಗ್ರಾಮೀಣ ರೈತರಿಂದ 80-85 ಲಕ್ಷ ಲೀಟರ್...







