ಹಂಪಿ ಪ್ರವಾಸಕ್ಕೆ ಬಂದಿದ್ದ ಕೇರಳದ ಬಸ್ ಪಲ್ಟಿ : ಮೂವರು ವಿದ್ಯಾರ್ಥಿಗಳು, ಓರ್ವ ಶಿಕ್ಷಕಿಗೆ ಗಾಯ-ಕಹಳೆ ನ್ಯೂಸ್
ಬಳ್ಳಾರಿ: ಕೇರಳದಿಂದ ಹಂಪಿಗೆ ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಟೂರಿಸ್ಟ್ ಮಿನಿ ಬಸ್ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ನಡೆದಿದೆ. ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಪಲ್ಟಿಯಾಗಿ, ಮೂವರು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ಕೂಡಿಸಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಅದೃಷ್ಟವಶಾತ್...







