Thursday, March 19, 2026

ರಾಜ್ಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿರುವ ಸಿದ್ದರಾಮಯ್ಯ : ಪ್ರಮುಖ ಘೋಷಣೆಗಳ ಮಾಹಿತಿ –ಕಹಳೆ ನ್ಯೂಸ್

ಸಿದ್ದರಾಮಯ್ಯನವರ ಹೊಸ ಸರ್ಕಾರದ ಪೂರಕ ಬಜೆಟ್ ಮಂಡನೆ ಆರಂಭವಾಗಿದ್ದು 14ನೇ ಬಾರಿ ದಾಖಲೆಯ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯನವರ ಮೇಲೆ ರಾಜ್ಯದ ಜನರ ಚಿತ್ತ ನೆಟ್ಟಿದೆ.. ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿಗಳು ರಾಜ್ಯದ ಜನರ ನಿರೀಕ್ಷೆಯನ್ನ ಹೆಚ್ಚಿಸಿದೆ. ಕಾಂಗ್ರೆಸ್‌ನ 5 ಗ್ಯಾರಂಟಿ ಯೋಜನೆಗಳಿಗೆ 59,000 ಕೋಟಿ ರೂಪಾಯಿ ವೆಚ್ಚ ಮತ್ತು ಪ್ರಸ್ತುತ ಬಜೆಟ್‌ನ ವೆಚ್ಚ 3.39 ಲಕ್ಷ ಕೋಟಿ ರೂಪಾಯಿ ಎಂದು ಸಿದ್ದರಾಮಯ್ಯ ಈ ಹಿಂದೆಯೇ ಬಹಿರಂಗ ಪಡಿಸಿದ್ದರು. ಮಾಜಿ ಸಿಎಂ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದ ಅಂಗನವಾಡಿಗಳಿಗೆ ಫಿಲ್ಟರ್ ನೀರು, ಶೌಚಾಲಯ ವ್ಯವಸ್ಥೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ –ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಅಂಗನವಾಡಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅವರಿಗೆ ಫಿಲ್ಟರ್ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಕರ್ನಾಟಕ ವಿಧಾನ ಸಭೆಯಲ್ಲಿ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಕೆ.ಎಂ. ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬರುವ ಬಜೆಟ್ ನಲ್ಲಿ ಈ ಯೋಜನೆ ಅಳವಡಿಸಿಕೊಳ್ಳಲು ಮುಖ್ಯಮಂತ್ರಿಗೆ ಈಗಾಗಲೇ ಮನವಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು....
ಮೈಸೂರುರಾಜಕೀಯರಾಜ್ಯಸುದ್ದಿ

ಫೇಸ್‌ಬುಕ್‌ನಲ್ಲಿ ಸಂಸದ ಪ್ರತಾಪ್ ಸಿಂಹ ಬಗ್ಗೆ ಅವಹೇಳನಾಕಾರಿ ಪೋಸ್ಟ್ : ಟ್ರಾಫಿಕ್ ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್ – ಕಹಳೆ ನ್ಯೂಸ್

ಫೇಸ್‌ಬುಕ್‌ನಲ್ಲಿ ಸಂಸದ ಪ್ರತಾಪ್ ಸಿಂಹ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಮೈಸೂರಿನ ವಿವಿ ಪುರಂ ಠಾಣೆಯ ಟ್ರಾಫಿಕ್ ಹೆಡ್ ಕಾನ್ಸ್ ಟೇಬಲ್  ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಇಲಾಖಾ ವಿಚಾರಣೆ ಬಾಕಿ ಇರಿಸಿ ಟ್ರಾಫಿಕ್ ಹೆಡ್ ಕಾನ್ಸ್ ಟೇಬಲ್  ಬಿ.ಪ್ರದೀಪ್ ಅವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ. ಇನ್ನು ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್ ಬಿ.ಪ್ರದೀಪ್, ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಬಂಧಿತ ಭ್ರಷ್ಟ ತಹಶೀಲ್ದಾರ್‌ ಪುತ್ತೂರಿನ ಅಜಿತ್‌ ರೈ ವಾಚ್‌ ಕಲೆಕ್ಷನ್‌ ನೋಡಿ ದಂಗಾದ ಲೋಕಾಯುಕ್ತ ಅಧಿಕಾರಿಗಳು ; ಏನು ಪತ್ತೆಯಾಗಿದೆ.? – ಕಹಳೆ ನ್ಯೂಸ್

ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ (Disproportionate Assets) ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕೆಆರ್‌ಪುರಂ ತಹಶೀಲ್ದಾರ್‌ (KR Puram Tahsildar) ಅಜಿತ್‌ ರೈ (Ajit Rai) ಮನೆಯಲ್ಲಿರುವ ವಾಚ್‌ಗಳನ್ನು (Watch) ನೋಡಿ ಲೋಕಾಯುಕ್ತ ಅಧಿಕಾರಿಗಳೇ (Lokayukta Officials) ದಂಗಾಗಿದ್ದಾರೆ. ಅಜಿತ್ ರೈ ಬಳಿ ಮೂರು Rado ವಾಚ್‌ ಪತ್ತೆಯಾಗಿದೆ. ಈ ಮೂರು ವಾಚ್ ಗಳ ಬೆಲೆ 5 ಲಕ್ಷ ರೂ.ಗೂ ಅಧಿಕ ಇರಬಹುದು ಎಂದು ಅಂದಾಜಿಸಲಾಗಿದೆ. ದಾಳಿ ವೇಳೆ ಸಿಕ್ಕ ಅಷ್ಟೂ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಭ್ರಷ್ಟಾಚಾರ ಕೇಸ್‌ ; ಭ್ರಷ್ಟ ತಹಶೀಲ್ದಾರ್‌ ಅಜಿತ್‌ ರೈ ಸ್ನೇಹಿತ ಪುತ್ತೂರಿನ ಗೌರವ್ ಶೆಟ್ಟಿ ಸೇರಿ ನಾಲ್ವರಿಗೆ ಲೋಕಾಯುಕ್ತ ನೋಟಿಸ್‌ ; ಸ್ನೇಹಿತರಿಗೂ ಡ್ರಿಲ್ ಮಾಡಲು ಸಿದ್ಧತೆ – – ಕಹಳೆ ನ್ಯೂಸ್

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆ.ಆರ್‌. ಪುರಂ ತಹಶೀಲ್ದಾರ್‌ ಅಜಿತ್‌ ರೈ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ ಬೆನ್ನಲ್ಲೇ ಅವರ ಸಹೋದರ ಸೇರಿ ನಾಲ್ವರಿಗೆ ನೋಟಿಸ್‌ ನೀಡಿದ್ದಾರೆ. ಸಹೋದರ ಆಶಿಕ್ ರೈ, ಸ್ನೇಹಿತರಾದ ಗೌರವ್, ಹರ್ಷವರ್ಧನ್ ಸೇರಿ ನಾಲ್ವರಿಗೆ ನೋಟಿಸ್‌ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಭ್ರಷ್ಟಾಚಾರ ಆರೋಪದಡಿ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್‌ ಅಜಿತ್‌ ರೈ ಮನೆ ಮೇಲೆ ಬುಧವಾರ...
ರಾಜಕೀಯರಾಜ್ಯವಾಣಿಜ್ಯಸುದ್ದಿ

ಇಂದಿನಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಶುರು – ಕಹಳೆ ನ್ಯೂಸ್

ಮೈಸೂರು : ಇಂದಿನಿಂದ (ಜೂನ್ 27) ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಆಗಸ್ಟ್ 17 ಅಥವಾ 18 ರಂದು ಮನೆ ಒಡತಿಯರ ಖಾತೆಗೆ 2 ಸಾವಿರ ರೂ ಹಣ ಜಮಾ ಮಾಡಲಾಗುತ್ತದೆ ಎಂದು ಈಗಾಗಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ ಸರ್ಕಾರದ ಸೇವಾಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಭೌತಿಕವಾಗಿ ಅರ್ಜಿ ಸಲ್ಲಿಸಬಹುದು....
ರಾಜ್ಯಸುದ್ದಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ಗೋ ವಂಶದ ಬಲಿ ಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ನಗರ ಠಾಣಾ ಪೊಲೀಸ್ ಅಧಿಕಾರಿಗೆ ಮನವಿ – ಕಹಳೆ ನ್ಯೂಸ್

ಪುತ್ತೂರು : ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020 ಹಾಗೂ ಕರ್ನಾಟಕ ಪ್ರಾಣಿ ಬಲಿ ನಿಷೇಧ 1959 (ತಿದ್ದುಪಡಿ 1975) ಇದು ಜಾರಿಯಲ್ಲಿದ್ದು ಅದರ ಪ್ರಕಾರ ಯಾವುದೇ ಗೋವಂಶ (ಯಾವುದೇ ವಯಸ್ಸಿನ ದನ, ಎತ್ತು, ಹೋರಿ ಕರು) ಗಳ ಬಲಿ / ಕುರ್ಬಾನಿ/ ಹತ್ಯೆ ಮಾಡುವುದನ್ನು ನಿಷೇಧಿಸಲಾಗಿದೆ. ಇದೇ ಜೂನ್ 29,30 ಮತ್ತು ಜುಲೈ 1 ರಂದು ಕುರ್ಬಾನಿಯ ಸಾಧ್ಯತೆಗಳಿದ್ದು. ಈ ತಾರಿಖಿನಂದು ಹಾಗೂ ಇತರೆ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರು ಶಾಸಕ ಅಶೋಕ್ ರೈ ಭೇಟಿ ಸಂದರ್ಭ ಇತಿಹಾಸ ಪ್ರಸಿದ್ಧ ಹಿಂದೂಗಳ ಶ್ರದ್ಧಾಕೇಂದ್ರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಮುಸ್ಲಿಂ ವ್ಯಕ್ತಿಯ ಪ್ರವೇಶ ; ಘಟನೆ ಮರುಕಳಿಸದಂತೆ, ಸೂಕ್ತ ಕ್ರಮ ಕೈಗೊಳ್ಳುವಂತೆ ಪುತ್ತಿಲ ಪರಿವಾರದಿಂದ ಮನವಿ – ಕಹಳೆ ನ್ಯೂಸ್

ಪುತ್ತೂರು ಮಹಾಲಿಂಗೇಶ್ವರ ದೇವಾಲಯದೊಳಗೆ ಅನ್ಯಮತೀಯರ ಪ್ರವೇಶಕ್ಕೆ ನಿರ್ಭಂಧ ಹೇರುವಂತೆ ಪುತ್ತಿಲ ಪರಿವಾರದಿಂದ ಮನವಿ ಮಹಾಲಿಂಗೇಶ್ವರ ದೇವಾಲಯದ ಒಳಗೆ ಅನ್ಯ ಸಮುದಾಯದವರನ್ನ ಬಿಡದಂತೆ ಪುತ್ತಿಲ ಪರಿವಾರದಿಂದ ದೇವಾಲಯದ ವ್ಯವಸ್ಧಾಪನ ಸಮಿತಿ ಅಧ್ಯಕ್ಷರಿಗೆ ಮನವಿ ಮಾಡಲಾಗಿದೆ. ಈ ಹಿಂದೆ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಶಾಸಕರೊಂದಿಗೆ ಅನ್ಯಮತಿಯ ಕೆಲ ಯುವಕರು ದೇವಾಲಯದ ಒಳಗೆ ಪ್ರವೇಶಿಸಿದ್ದಾರೆ. ಅಲ್ಲದೇ ಅನುಮಾನಸ್ಪದ ರೀತಿಯಲ್ಲಿ...
1 159 160 161 162 163 274
Page 161 of 274