ಮತದಾನಕ್ಕೆ ಉಡುಪಿ ಜಿಲ್ಲೆಯ ತಯಾರಿ ಪೂರ್ಣ ; ಅರ್ಹರೆಲ್ಲರೂ ಮತದಾನ ಮಾಡಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಪತ್ರಿಕಾಗೋಷ್ಠಿ – ಕಹಳೆ ನ್ಯೂಸ್
ಉಡುಪಿ: ವಿಧಾನಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಎಲ್ಲ ರೀತಿಯ ಸಿದ್ಧತೆಗಳು ಪೂರ್ಣಗೊಂಡಿವೆ. ಜಿಲ್ಲೆಯಲ್ಲಿ ಒಟ್ಟು 10,41,915 ಮಂದಿ ಮತದಾರರಿದ್ದು, ಮೇ 10ರಂದು ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಜಿಲ್ಲೆಯ 1111 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಅರ್ಹರೆಲ್ಲರೂ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು. ಮತದಾರರು ಚುನಾವಣಾ ಆಯೋಗ ನಮೂದಿಸಿದ ಯಾವುದಾದರೊಂದು ಗುರುತಿನ ದಾಖಲೆಯೊಂದಿಗೆ ಮತದಾನ ಕೇಂದ್ರಕ್ಕೆ ಆಗಮಿಸಬಹುದು. 5 ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 5ರಂತೆ ಒಟ್ಟು...







