ಕದ್ರಿ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ : ಬ್ಯಾನರ್ ಅಳವಡಿಕೆಗೆ ಸಮ್ಮತಿ ಸೂಚಿಸದ ಆಡಳಿತ ಮಂಡಳಿ – ವಿಹಿಂಪ-ಬಜರಂಗದಳ ಅಳವಡಿಸಿದ್ದ ಬ್ಯಾನರ್ ತೆರವು – ಕಹಳೆ ನ್ಯೂಸ್
ಮಂಗಳೂರು: ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ಮಾಡುವುದಕ್ಕೆ ಅವಕಾಶವಿಲ್ಲ ಎಂದು ವಿಹಿಂಪ-ಬಜರಂಗದಳ ವತಿಯಿಂದ ಅಳವಡಿಸಿದ ಬ್ಯಾನರನ್ನು ಪೊಲೀಸರು ಗುರುವಾರ ತೆರವುಗೊಳಿಸಿದ್ದಾರೆ. ಜ.15ರಿಂದ 21ರ ವರೆಗೆ ಜಾತ್ರೆ ನಡೆಯಲಿದೆ. ಈ ನಡುವೆ ಗುರುವಾರ ಕ್ಷೇತ್ರದಲ್ಲಿ ಬ್ಯಾನರ್ ಕಂಡು ಬಂದಿದೆ. ಅದರಲ್ಲಿ ಕುಕ್ಕರ್ ಬಾಂಬ್ ಸ್ಫೋಟವನ್ನೂ ಉಲ್ಲೇಖ ಮಾಡಲಾಗಿದೆ. ಸ್ಫೋಟದ ಆರೋಪಿ ಮೊದಲು ಗುರಿ ಮಾಡಿದ್ದೇ ಕದ್ರಿ ಮಂಜುನಾಥ ದೇವಸ್ಥಾನವನ್ನು. ಅಂತಹ ಮನಸ್ಥಿತಿ ಉಳ್ಳವರಿಗೆ ಹಾಗೂ ವಿಗ್ರಹಾರಾಧನೆ...







