ಮೂಡುಬಿದಿರೆ ಜಾಂಬೂರಿಗೆ ಹರಿದು ಬಂದ ಜನಸ್ತೋಮ ; ಪಿಲಿಕುಳದಲ್ಲಿ ಯುವಶಕ್ತಿ ಕೇಂದ್ರ ನಿರ್ಮಾಣವಾಗಬೇಕಿದೆ : ಡಾ. ಎಂ.ಮೋಹನ್ ಆಳ್ವ – ಕಹಳೆ ನ್ಯೂಸ್
ಮೂಡುಬಿದಿರೆ: ಕಳೆದ ಆರು ದಿನಗಳ ಕಾಲ ಮೂಡುಬಿದಿರೆಯ ಆಳ್ವಾಸ್ ನ ವಿದ್ಯಾಗಿರಿ ಆವರಣದಲ್ಲಿ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಅಭೂತಪೂರ್ವ ಜನಬೆಂಬಲ ದೊರಕುವ ಮೂಲಕ ಯಶಸ್ವಿಯಾಗಿದೆ. ಪ್ರತಿದಿನ ಲಕ್ಷಾಂತರ ಮಂದಿ ಜಾಂಬೂರಿಯನ್ನು ವೀಕ್ಷಿಸುವ ಮೂಲಕ ವಿದ್ಯಾಗಿರಿಯಲ್ಲಿ ವಿಸ್ಮಯ ಲೋಕವೇ ಸೃಷ್ಟಿಯಾಗಿತ್ತು ಎಂದು ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ತಿಳಿಸಿದ್ದಾರೆ. ಸೋಮವಾರ (ಡಿಸೆಂಬರ್ 26) ಆಳ್ವಾಸ್ ನ ವಿದ್ಯಾಗಿರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ...







