ಕುಕ್ಕೆ ಸುಬ್ರಹ್ಮಣ್ಯಕ್ಕೆ ಕುಟುಂಬ ಸಮೇತ ಭೇಟಿ ನೀಡಿ ವಿದ್ಯಾಪ್ರಸನ್ನತೀರ್ಥ ಶ್ರೀಪಾದರ ಆಶೀರ್ವಾದ ಪಡೆದ ನಟ, ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ – ಕಹಳೆ ನ್ಯೂಸ್
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕನ್ನಡ ಚಿತ್ರರಂಗದ ನಾಯಕ ನಟ, ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಇಂದು ಭೇಟಿ ನೀಡಿದರು. ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ವತಿಯಿಂದ ಶಿವರಾಜ್ ಕುಮಾರ್ ಅವರನ್ನು ಬರಮಾಡಿಕೊಳ್ಳಲಾಯಿತು. ದೇವಳದ ಸಮಿತಿಯವರು, ಅಧಿಕಾರಿಗಳು, ಸಿಬಂದಿಗಳು ಉಪಸ್ಥಿತರಿದ್ದರು. ಬಳಿಕ ನಟ ಶಿವರಾಜ್ ಕುಮಾರ್ ಸಂಪುಟ ಶ್ರೀ ನರಸಿಂಹ...







