ಮತ್ತೆ ಕ್ರೂಸ್ ಪ್ರವಾಸೋದ್ಯಮಕ್ಕೆ ಕಳೆ : 271 ಪ್ರವಾಸಿಗರನ್ನು ಹೊತ್ತ ಹಡಗು ಮಂಗಳೂರಿಗೆ ; ಯಕ್ಷಗಾನ, ಚೆಂಡೆ ವಾದನಗಳೊಂದಿಗೆ ಪ್ರವಾಸಿಗರ ಸ್ವಾಗತ – ಕಹಳೆ ನ್ಯೂಸ್
ಪಣಂಬೂರು: ಎರಡು ವರ್ಷ ಕೊರೊನಾ ಹೊಡೆತದಿಂದ ನಲುಗಿದ ಪ್ರವಾಸೋದ್ಯಮ ಚಟುವಟಿಕೆ ಮತ್ತೆ ಗರಿಗೆದರುವ ಲಕ್ಷಣ ಕಂಡು ಬಂದಿದೆ. ಸೋಮವಾರ ನವಮಂಗಳೂರು ಬಂದರಿಗೆ 271 ಪ್ರವಾಸಿಗರು ಮತ್ತು 373 ಮಂದಿ ಸಿಬಂದಿಯನ್ನು ಹೊತ್ತ ಎಂಎಸ್ ಯುರೋಪಾ 2 ಆಗಮಿಸಿತು. ಯಕ್ಷಗಾನ, ಚೆಂಡೆ ವಾದನಗಳೊಂದಿಗೆ ಪ್ರವಾಸಿಗರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಬಸ್ ಹಾಗೂ ಖಾಸಗೀ ಪ್ರವಾಸಿ ಕಾರು ಗಳಲ್ಲಿ ಪ್ರವಾಸಿಗರನ್ನು ಮೂಡುಬಿದಿರೆಯ ಸಾವಿರ ಕಂಬದ ಬಸದಿ, ಮಂಗಳೂರಿನ ಸೈಂಟ್ ಅಲೋಶಿಯಸ್ ಚಾಪೆಲ್, ಕದ್ರಿ ದೇವಸ್ಥಾನ,...







