ನಾಳೆ ರಾಜ್ಯ ಬಂದ್‌ಗೆ ಕರೆ : ರಾಜ್ಯಾದ್ಯಂತ ಪೊಲೀಸ್ ಬಂದೋಬಸ್ತ್ – ಕಹಳೆ ನ್ಯೂಸ್
ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡ ಸಂಘಟನೆಗಳು ಶನಿವಾರ ಬಂದ್ ಆಚರಿಸಲಿದ್ದು, ವಿವಿಧ ಸಂಘಟನೆಗಳು, ಸಂಘ ಸಂಸ್ಥೆಗಳು ಬೆಂಬಲ ನೀಡಿವೆ. ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಬಂದೋ ಬಸ್ತ್ ಏರ್ಪಡಿಸಲಾಗಿದೆ. ಕನ್ನಡ ಸಂಘಟನೆಗಳು ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ, ತಹಶೀಲ್ದಾರ್ ಕಚೇರಿಗಳಿಗೆ ಮುತ್ತಿಗೆ ಹಾಕಲಿವೆ. ಜತೆಗೆ ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಿ ರಸ್ತೆ ಮತ್ತು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಲು ಸಂಘಟನೆಗಳು ಸಜ್ಜಾಗಿವೆ. ಬಿಗಿ ಬಂದೋ ಬಸ್ತ್ ಬೆಂಗಳೂರು ಸೇರಿ...







