ಪ್ರಧಾನಿ ಗ್ರಾಮ ಸಡಕ್ ಯೋಜನೆಯಡಿ ರಾಜ್ಯಕ್ಕೆ 5612 ಕಿ.ಮೀ ರಸ್ತೆ ಹಂಚಿಕೆ-ಕಹಳೆ ನ್ಯೂಸ್
ಬೆಂಗಳೂರು- ಕೇಂದ್ರ ಸರ್ಕಾರ ಮುಖ್ಯ ರಸ್ತೆ ಪ್ರಮುಖ ಗ್ರಾಮೀಣ ಭಾಗದ ಕೂಡು ರಸ್ತೆಗಳ ಬಲವರ್ಧನೆ ಮತ್ತು ನವೀಕರಣ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಗೆ ರಾಜ್ಯಕ್ಕೆ 5612.50 ಕಿ.ಮೀ ರಸ್ತೆ ಹಂಚಿಕೆ ಮಾಡಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಹಂಚಿಕೆಯಾಗಿರುವ 5612.50 ಕಿ.ಮೀ ರಸ್ತೆಗೆ ಕೇಂದ್ರ ಶೇ.60ರಷ್ಟು ಹಾಗೂ ರಾಜ್ಯ ಸರ್ಕಾರ ಶೇ.40 ರಷ್ಟು ಅನುದಾನವನ್ನು ನೀಡಲಿದೆ ಎಂದು ತಿಳಿಸಿದರು.ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 445ರಷ್ಟು...







