ಒಂದು ವರ್ಷ ವಿದ್ಯುತ್ ದರ ಏರಿಕೆ ಬರೆ ಬೇಡ :ಕುಮಾರಸ್ವಾಮಿ -ಕಹಳೆ ನ್ಯೂಸ್
ಬೆಂಗಳೂರು- ರಾಜ್ಯದಲ್ಲಿ ವ್ಯಾಪಕವಾಗಿ ಹರಡಿರುವ ಕೊರೊನಾ ಸೋಂಕು ಹಾಗೂ ನೆರೆ ಹಾವಳಿಯಿಂದ ಜನರು ತತ್ತರಿಸಿರುವ ಹಿನ್ನೆಲೆಯಲ್ಲಿ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಸಂಕಷ್ಟದಲ್ಲಿರುವ ಜನರ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಹೊರೆಯನ್ನು ಹೊರಿಸಬಾರದು ಎಂದು ಅವರು ಟ್ವೀಟರ್ನಲ್ಲಿ ಒತ್ತಾಯಿಸಿದ್ದಾರೆ. ಕೊರೊನಾ ಸೋಂಕು ತಗುಲಿದ ನಂತರ ನಾಡಿನ ಜನರು ತೀವ್ರ ಆರ್ಥಿಕ...







