“ಜ್ಞಾನದ ಸೂಪರ್ ಪವರ್ ಆಗಿ ಹೊರಹೊಮ್ಮಲಿದೆ ಭಾರತ” – ಕಹಳೆ ನ್ಯೂಸ್
ಬೆಂಗಳೂರು,ಸೆ.15- ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ ಭಾರತವು ಜಗತ್ತಿನಲ್ಲಿಯೇ ಜ್ಞಾನದ ಸೂಪರ್ ಪವರ್ ಆಗಿ ಹೊರಹೊಮ್ಮಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕ್ರಿಸ್ತು ಜಯಂತಿ ಕಾಲೇಜು ಹಾಗೂ ಬೆಂಗಳೂರು ಶೈಕ್ಷಣಿಕ ಮತ್ತು ಸಾಮಾಜಿಕ ಅಧ್ಯಯನ ಕೇಂದ್ರ ಹಮ್ಮಿಕೊಂಡಿದ್ದ ಶಿಕ್ಷಣ ನೀತಿ ಜಾರಿ ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಅವರು ಮಾತನಾಡಿದರು. ಭಾರತದ ಶಿಕ್ಷಣ ವ್ಯವಸ್ಥೆ ಹೇಗಿರಬೇಕು? ಯಾವ...







